Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪದವಿ ಪೂರ್ವ ಕಾಲೇಜಿನ ಕಬ್ಬಡಿ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

ಮಂಗಳೂರು ನಂ. 15 : ಶಕ್ತಿನಗರ ಶಕ್ತಿ ಪದವಿ ಪೂರ್ವ ಕಾಲೇಜಿನ 19 ರ ಒಳಗಡೆಯ ವಯೋಮಿತಿಯ ಬಾಲಕರ ಕಬ್ಬಡಿ ತಂಡವು ಪೂಂಜಲಕಟ್ಟೆ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಪಂದ್ಯಾಟದಲ್ಲಿ ಎಸ್‌ಡಿಎಂ ಕಾಲೇಜಿನ ಎದುರು ಪ್ರಥಮ ಸ್ಥಾನವನ್ನು ಪಡೆದಿದೆ ಹಾಗೂ ಬಾಯಾರ್‌ನಲ್ಲಿ ನಡೆದ 19 ರ ವಯೋಮಿತಿಯ ಮುಕ್ತ ಕಬ್ಬಡಿ ಪಂದ್ಯಾವಳಿಯಲ್ಲಿ ಶಕ್ತಿ ಪಪೂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ದೈಹಿಕ ಶಿಕ್ಷಕರಾದ ಆಕಾಶ್ ಶೆಟ್ಟಿ ತರಬೇತುದಾರರಾಗಿದ್ದು ಮಾರ್ಗದರ್ಶನ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ. ಸಿ. ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ. ಅಭಿನಂದಿಸಿರುತ್ತಾರೆ.