Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಾರ್ವಿ ಶೆಟ್ಟಿಗೆ ಬಾಕ್ಸಿಂಗ್‌ನಲ್ಲಿ ಕಂಚು 

ಮಂಗಳೂರು ಜು. 03 : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶಾರ್ವಿ ಆರ್ ಶೆಟ್ಟಿ ಇವರು ದಿನಾಂಕ 25-06-2023 ರಿಂದ 01-07-2023 ರವರೆಗೆ ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ 6ನೇ ಯೂತ್ ಮಹಿಳಾ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಗೆದ್ದಿರುತ್ತಾರೆ ಹಾಗೂ ಇತ್ತೀಚೆಗೆ ನಡೆದ SGFI ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ. ಸಿ. ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.