Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪ. ಪೂ. ಕಾಲೇಜಿನಲ್ಲಿ ಕಬಡ್ಡಿ ಮತ್ತು ವಾಲಿಬಾಲ್ ಪ್ರತಿಭೆಗಳಿಗೆ ಉಚಿತ ಶಿಕ್ಷಣದ ಅವಕಾಶಗಳು 

ಮಂಗಳೂರು ಏ. 10 : ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ 2023-24 ನೇ ಸಾಲಿನಲ್ಲಿ ಕಬಡ್ಡಿ ಮತ್ತು ವಾಲಿಬಾಲ್ ಬಾಲಕರಿಗೆ ಉಚಿತ ಶಿಕ್ಷಣದ ಅವಕಾಶವನ್ನು ಕಲ್ಪಿಸಲಾಗಿದೆ.

ದಿನಾಂಕ 17-04-2023 ರಂದು ಕಬಡ್ಡಿ ಮತ್ತು 18-04-2023  ರಂದು ವಾಲಿಬಾಲ್ ಆಯ್ಕೆ ಪ್ರಕ್ರಿಯೆ ಬೆಳಗ್ಗೆ 9 ಗಂಟೆಗೆ ಶಕ್ತಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು. ಭಾಗವಹಿಸುವ ಆಟಗಾರರು 2006 ರ ನಂತರದಲ್ಲಿ ಜನಿಸಿರಬೇಕು.

2022-23 ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರಬೇಕು. ಜನ್ಮದಿನಾಂಕದ ದಾಖಲೆಗಾಗಿ ಅಂಕಪಟ್ಟಿ ಅಥವಾ ಜನ್ಮಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಪಾಲ್ಗೊಳುವ ಆಟಗಾರರಿಗೆ ಮಾತ್ರವೇ ಕಾಲೇಜು ಆವರಣದ ಒಳಗೆ ಪ್ರವೇಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಕ್ತಿ ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಮನೋಜ್ ಕುಮಾರ್ ಅವರನ್ನು ಸಂಪರ್ಕಿಸಬಹುದಾಗಿದೆ. ಇವರ ಮೊಬೈಲ್ ಸಂಖ್ಯೆ: 9743374795 ಕ್ಕೆ ಸಂಪರ್ಕಿಸುವಂತೆ ಕೋರಲಾಗಿದೆ.