Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗೆ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ

ಮಂಗಳೂರು, ಜುಲೈ 18 : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಥಮ್ ನಾಯಕ್ ಇವರು ಶಿವಮೊಗ್ಗದಲ್ಲಿ ಜುಲೈ 10 ರಿಂದ ಜುಲೈ 15 ರವರೆಗೆ ನಡೆದ ಯೋನೆಕ್ಸ್ ಸನ್‌ರೈಸ್ ಕರ್ನಾಟಕ ರಾಜ್ಯ 19 ರ ವಯೋಮಿತಿಯ ಮತ್ತು ಸೀನಿಯರ್ ರ್‍ಯಾಂಕಿಂಗ್ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2023 ರಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಗೆದ್ದಿರುತ್ತಾರೆ. ಇವರು ಇತ್ತೀಚೆಗೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ SಉಈI ರಾಷ್ಟ್ರೀಯ ಶಾಲಾ ಕ್ರೀಡಾಕೂಟ 2022-23 ರಲ್ಲಿ ಭಾಗವಹಿಸಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.