Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಸೆ. 22 ರಂದು ಶಕ್ತಿ ವಸತಿ ಶಾಲೆಯ ಅಧ್ಯಾಪಕರಿಗೆ ಕಾರ್ಯಾಗಾರ

ಮಂಗಳೂರು : ಶಕ್ತಿನಗರ ಶಕ್ತಿ ವಸತಿ ಶಾಲೆಯ ಅಧ್ಯಾಪಕರಿಗೆ ದಿನಾಂಕ 22-9-2018 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂವಹನ ಹಾಗೂ ಮಾನವ ಸಂಪನ್ಮೂಲ ತರಬೇತಿ ಕಾರ್ಯಾಗಾರ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರಾವಳಿ ಶಿಕ್ಷಕ ತರಬೇತಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಶ್ರೀಮತಿ ಮಾಧುರಿ ಶ್ರೀರಾಮ್ ಹಾಗೂ ಆಸರೆ ಚಾರಿಟೇಬಲ್ ಟ್ರಸ್ಟ್‌ನ್ ಅಧ್ಯಕ್ಷೆಯಾದ ಡಾ. ಆಶಾ ಜ್ಯೋತಿ ರೈ ಅವರು ಆಗಮಿಸಲಿದ್ದಾರೆ.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಹಾಗೂ ಅವರ ತಂಡ ಭಾಗವಹಿಸಲಿದ್ದಾರೆ. ಸಂಜೆ 3.30  ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ರಾಜ ಗೋಪಾಲ ರೈ ಹಾಗೂ ಶಕ್ತಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಭಾಕರ ಜಿ. ಎಸ್. ಪಾಲ್ಗೊಳ್ಳಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಕೆ.ಸಿ. ನಾಯ್ಕ್ ವಹಿಸಲಿರುವರು.