Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಿಕ್ಷಣದ ಮೂಲಕ ಶಿಸ್ತು ಹಾಗೂ ಸಂಸ್ಕಾರವನ್ನು ಪಡೆಯಿರಿ – ತೇಜಸ್ವಿನಿ ಗೌಡ ವಿಧಾನ ಪರಿಷತ್ ಸದಸ್ಯೆ

ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮವನ್ನು ಸೆಪ್ಟೆಂಬರ್ 7 ರಂದು ಆಯೋಜಿಸಲಾಯಿತು. ಈ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡುತ್ತಾ ವಿದ್ಯಾರ್ಥಿಗಳು ಯಾರ ಒತ್ತಡಕ್ಕೂ ಮಣಿಯದೆ ತಮ್ಮ ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಯಾವುದು ಒಳ್ಳೆಯದು ಯಾವುದು ಕೆಟ್ಟದು ಎಂಬುವುದನ್ನು ಯೋಚನೆ ಮಾಡುವ ಶಕ್ತಿ ನಿಮ್ಮಲ್ಲಿ ಇರಬೇಕೆಂದು ಹೇಳಿದರು.

ಮುಂದುವರಿದು ಮಾತನಾಡಿದ ಅವರು ದೇಶಕ್ಕೆ ಒಳ್ಳೆಯ ನಾಗರಿಕನಾಗಿ, ಉತ್ತಮ ಪ್ರಜೆಯಾಗಿ ಬದುಕಬೇಕು. ದೇಶ ಮೊದಲು ಎಂಬುವುದು ನಾವೆಲ್ಲ ತಿಳಿಯಬೇಕು. ಆ ಮೂಲಕ ಶಿಸ್ತು ಹಾಗೂ ಸಂಸ್ಕಾರವನ್ನು ರೂಡಿಸಬೇಕೆಂದು ಕರೆ ನೀಡಿದರು. ದೇಶದ ಸೈನ್ಯಾಧಿಕಾರಿ, ಉತ್ತಮ ವಕೀಲ, ಉತ್ತಮ ವೈದ್ಯ ಹಾಗೂ ಉತ್ತಮ ಇಂಜಿನಿಯರ್ ಆಗುವ ಕನಸು ಹೊತ್ತು ಓದಬೇಕು. ಆ ಮೂಲಕ ಸಮಾಜದ ಋಣ ತೀರಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪರವಾಗಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆಡಳಿತ ಮೊಕ್ತೇಸರ ಶ್ರೀ ಕೆ. ಸಿ ನಾಯ್ಕ್, ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ, ಶಕ್ತಿ ಪ. ಪೂ. ಕಾಲೇಜು ಪ್ರಾಚಾರ್ಯ ಪ್ರಭಾಕರ ಜಿ.ಎಸ್, ಸಂಸ್ಥೆ ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು, ಮತ್ತು ಶಕ್ತಿ ವಸತಿ ಶಾಲೆ ಪ್ರಾಚಾರ್ಯರಾದ ಶ್ರೀಮತಿ ಮಧುಲಿಕಾ ರಾವ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದ ಮಾಜಿ ಟ್ರಸ್ಟಿ ಶ್ರೀ ಕಿಶೋರ ಶಿರಾಡಿ, ಬಿಜೆಪಿ ರಾಜ್ಯ ಸಹ ವಕ್ತಾರ ಮಹೇಶ ತುಪ್ಪೆಗಲ್ಲ ಕಾವೂರು ಕೊ-ಓಪರೇಟಿವ್ ಬ್ಯಾಂಕ್ ನಿರ್ದೇಶಕರಾದ ಲೋಕೇಶ್ ಭಂಡಾರಿ ಉಪಸ್ಥಿತರಿದ್ದರು.