Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

Drug Awareness Program

ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ

ಮಂಗಳೂರು : ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳೂರು ನಗರ ಪೊಲೀಸ್‌ನ ಇಕೊನಾಮಿಕ್ ಮತ್ತು ನಾರ್ಕೋಟಿಕ್ಸ್‌ ಕ್ರೈಂ ಪೊಲೀಸ್‌ಠಾಣೆಯ ವತಿಯಿಂದ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ ಕುರಿತಂತೆ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್. ಮಾತನಾಡಿ ಡ್ರಗ್ಸ್ ಪಿಡುಗು ಯುವ ಸಮುದಾಯಕ್ಕೆ ಮಾರಕ. ಡ್ರಗ್ಸ್‌ನಲ್ಲಿ ಯಾವ ರೀತಿಯ ವಸ್ತುಗಳು ವಿದ್ಯಾರ್ಥಿ ಹಾಗೂ ಯುವ ಸಮುದಾಯವನ್ನು ಕೆಟ್ಟ ದಾರಿಗೆ ತೆಗೆದುಕೊಂಡು ಹೋಗುತ್ತದೆ ಎಂಬುವುದನ್ನು ಸವಿಸ್ತಾರವಾಗಿ ವಿವರಿಸಿದರು. ಕೇವಲ ಸಂತೋಷಕ್ಕೋಸ್ಕರ ಪ್ರಾರಂಭಿಸಿದ ಚಟ ಜೀವನವನ್ನು ಅಂತ್ಯ ಮಾಡುತ್ತದೆ. ಒಂದು ಸಲ ಚಟದಲ್ಲಿ ಬಿದ್ದ ವ್ಯಕ್ತಿಯನ್ನು ಅದರಿಂದ ಹೊರಗಡೆ ತರಲು ಸಾಕಷ್ಟು ದಿನಗಳು ಬೇಕಾಗುತ್ತದೆ. ಈ ಸಮಯದಲ್ಲಿ ವ್ಯಕ್ತಿಯನ್ನು ಸಮಾಜ ನೋಡುವ ವಿಧಾನ, ಮನೆಯಲ್ಲಿ ಪೋಷಕರು ಅನುಭವಿಸುವ ದುಖಃ ಯಾರಿಗೂ ಬರಬಾರದೆಂದರೆ ಅಂತಹ ಮಾದಕ ವಸ್ತುಗಳಿಂದ ದೂರವಿರುವುದೇ ಉತ್ತಮ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಇಲಾಖೆಯ ಆರಕ್ಷಕರಾದ ಶಿವಕುಮಾರ್ ಮಾತನಾಡಿ ಕಾನೂನಿನಲ್ಲಿ ಒಬ್ಬ ವ್ಯಕ್ತಿ ಡ್ರಗ್ಸ್ ಮಾಫಿಯಾದಲ್ಲಿ ಪೊಲೀಸ್‌ರಿಗೆ ಸಿಕ್ಕ ನಂತರ ಅವನ ಮೇಲೆ ಕಾನೂನು ಕ್ರಮ ಕೈಗೊಂಡಾಗ ಅವನು ಅನುಭವಿಸುವ ನೋವಿಗಿಂತ ನಾವು ಅಂತಹ ಚಟುವಟಿಕೆಯಿಂದ ದೂರವಿರಬೇಕೆಂದು ಹೇಳಿದರು. ನಾವು ಮಾದಕ ವಸ್ತುಗಳನ್ನು ಕಾಲೇಜಿಗೆ ಅಥವಾ ಯಾವುದೇ ವ್ಯಕ್ತಿಗೆ ಕೊಡುತ್ತಿರುವುದು ಗಮನಕ್ಕೆ ಬಂದಲ್ಲಿ ಅದನ್ನು ನಮ್ಮ ಗಮನಕ್ಕೆ ತರಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಲಕ್ಷ್ಮೀಶ್ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. ವಿದ್ಯಾರ್ಥಿಗಳ ಅನೇಕ ಪ್ರಶ್ನೆಗಳಿಗೆ ಅವರು ಉತ್ತರವನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಶಕ್ತಿ ಎಜ್ಯುಕೇಶನ್‌ಟ್ರಸ್ಟ್‌ನ ಪ್ರಧಾನ ಸಲಹೆಗಾರರಮೇಶ್ ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಉಪನ್ಯಾಸಕಿ ಹರ್ಷಿತಾ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕ ಶ್ರೀನಿಧಿ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.