ಮಂಗಳೂರು ಫೆ. 06 : ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಮ ಮಂದಿರದ ನಿರ್ಮಾಣಕ್ಕೋಸ್ಕರ ನಿಧಿ ಸಮರ್ಪಣೆಯನ್ನು ಶ್ರೀ ಗೋಪಾಲಕೃಷ್ಣ ದೇವರಿಗೆ ಪೂಜೆ ಸಲ್ಲಿಸಿ ಅಯೋಧ್ಯಾ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ಗೆ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಸಿ. ಪಿ ಕಾಮತ್, ಶಕ್ತಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ. ಕೆ. ಸಿ ನಾೖಕ್, ಶಕ್ತಿ ಶಿಕ್ಷಣ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ ಉಪಸ್ಥಿತರಿದ್ದರು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆಂಕಟ್ರಮಣ ಪ್ರಾರ್ಥನೆಯನ್ನು ನೆರವೇರಿಸಿದರು.



