ಮಂಗಳೂರು, ಜ. 26 : ಶಕ್ತಿನಗರದ ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ ಪೂ ಕಾಲೇಜು ವತಿಯಿಂದ ಜನವರಿ 26 ರಂದು ಬೆಳಗ್ಗೆ 8.45 ಗಂಟೆಗೆ ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹೊಸದಿಗಂತ ಕನ್ನಡ ದಿನಪತ್ರಿಕೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಪಿ. ಎಸ್. ಪ್ರಕಾಶ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿಯಾದ ಡಾ. ಕೆ. ಸಿ. ನಾೖಕ್ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸಂಜೀತ್ ನಾೖಕ್, ಪ್ರಧಾನ ಸಲಹೆಗಾರ ರಮೇಶ ಕೆ, ಅಭಿವೃದ್ಧಿ ಅಧಿಕಾರಿ ಪ್ರಕ್ಯಾತ್ ರೈ, ಶೈಕ್ಷಣಿಕ ಸಂಯೋಜಕರಾದ ಪೃಥ್ವಿರಾಜ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ. ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜಕಿ ನೀಮಾ ಸಕ್ಸೇನಾ ಉಪಸ್ಥಿತರಿರುತ್ತಾರೆ.