Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಂಗಳೂರು ನಂ. 3 : ಶಕ್ತಿನಗರ ಶಕ್ತಿ ಪದವಿ ಪೂರ್ವ ಕಾಲೇಜಿನ 19 ರ ಒಳಗಡೆಯ ವಯೋಮಿತಿಯ ಬಾಲಕರ ವಾಲಿಬಾಲ್ ತಂಡವು ಕಲ್ಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದ ರಾಜ್ಯ ಮಟ್ಟದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಕೊಂಡಿರುತ್ತಾರೆ. ಶಕ್ತಿ ಪಪೂ ಕಾಲೇಜಿನ ದೈಹಿಕ ಶಿಕ್ಷಕರಾದ ಮನೋಜ್ ರವರು ತರಬೇತುದಾರರಾಗಿದ್ದು ಮಾರ್ಗದರ್ಶನ ಮಾಡಿರುತ್ತಾರೆ. ಈ ಮೂಲಕ ಶಕ್ತಿ ಪಪೂ ಕಾಲೇಜು ವಾಲಿಬಾಲ್ ತಂಡ ಇದೇ ಬರುವ ನವೆಂಬರ್ 28 ರಿಂದ ಉತ್ತರ ಪ್ರದೇಶದ ವೃಂದಾವನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದೆ.

ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಕ್, ಆಡಳಿತಾಧಿಕಾರಿ ಡಾ. ಕೆ.ಸಿ. ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ಅಭಿನಂದಿಸಿರುತ್ತಾರೆ.