Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ 

ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ವಿನೀತ್ ಕುಮಾರ್ ಹಾಗೂ ಮಯೂರ್ ಡಿ ಶೆಟ್ಟಿ ಇವರು ಜುಲೈ 16 ರಂದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದ 3ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ – 2023 ರಲ್ಲಿ ಕಿಕ್‌ಲೈಟ್ ಮತ್ತು ಲೈಟ್ ಕಾಂಟ್ಯಕ್ಟ್ ಈವೆಂಟ್‌ನಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ ಹಾಗೂ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.