Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶ್ರೀಮತಿ ಭವಾನಿ ಜೋಗಿ ಅವರಿಗೆ ಅಭಿನಂದನೆಗಳು

ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜು, ಶಕ್ತಿನಗರ, ಮಂಗಳೂರು ಇಲ್ಲಿಯ ಆರೋಗ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಭವಾನಿ ಜೋಗಿ ಇವರು ದಿನಾಂಕ 13 ರಿಂದ 17 ರ ಫೆಬ್ರವರಿ 2024 ರಂದು ಮಹಾರಾಷ್ಟ್ರದ ಪೂನಾದಲ್ಲಿ ನಡೆದ 44 ನೇ ಮಾಸ್ಟರ್‍ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಶಾಟ್ ಪುಟ್, ಜಾವಲಿನ್, 4×100ಮೀ ರಿಲೆಯಲ್ಲಿ ಬೆಳ್ಳಿ ಮತ್ತು ಡಿಸ್ಕಸ್ ಎಸೆತದಲ್ಲಿ ಕಂಚಿನ ಪದಕಗಳನ್ನು ಗಳಿಸಿರುತ್ತಾರೆ ಹಾಗೂ ಮುಂಬರುವ 2024 ರ ಆಗಸ್ಟ್ ತಿಂಗಳಿನಲ್ಲಿ ಸ್ವಿಡನ್ ದೇಶದಲ್ಲಿ ನಡೆಯಲಿರುವ ವಿಶ್ವ ಮಾಸ್ಟರ್‍ಸ್ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.