Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ವಿಶ್ವ ಪರಿಸರ ದಿನಾಚರಣೆಯನ್ನು ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ, ಶ್ರೀ ಪಿ ಶ್ರೀಧರ್, ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಹುಟ್ಟು ಹಬ್ಬದ ಆಚರಣೆಯನ್ನು ಗಿಡ ನೆಡುವುದರ ಮೂಲಕ ಆಚರಿಸಬೇಕೆಂದು ಮನವರಿಕೆ ಮಾಡಿದರು, ಹಾಗೆಯೇ ಶಾಲೆಗೆ ಅತ್ಯಂತ ಶ್ರೇಷ್ಠವಾದ ಶ್ರೀಗಂಧ ಹಾಗೂ ಇತರ ಸಸಿಗಳನ್ನು ಕೊಡುಗೆಯಾಗಿ ನೀಡುವುದರ ಮೂಲಕ ಗಿಡ ಬೆಳೆಸುವುದರ ಜಾಗೃತಿಯನ್ನು ಮೂಡಿಸಿದರು. ಶಕ್ತಿ ವಿದ್ಯಾಸಂಸ್ಥೆಯ ಮುಖ್ಯ ಸಲಹೆಗಾರರಾದ ರಮೇಶ್ ಕೆ. ರವರು ಮಾತನಾಡುತ್ತಾ, ಮುಂಬರುವ ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಗಿಡವನ್ನು ನೆಡುವಂತೆ ಸಲಹೆಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಬಬಿತ ಸೂರಜ್ ರವರು ಮುಖ್ಯ ಅತಿಥಿಗಳನ್ನು ಸ್ವಾಗತಿಸಿದರು, ಶಾಲಾ ಶಿಕ್ಷಕಿ ಶ್ರೀಮತಿ ಮಧುರ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ಆನೆಟ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ವಿಶ್ವ ಪರಿಸರ ದಿನಾಚರಣೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಂದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಎಂಟನೇ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳು ಜಾಥಾ ಹೋಗುವುದರ ಮೂಲಕ ಘೋ?ಣೆ ಕೂಗುತ್ತಾ ಜನರಿಗೆ ಪರಿಸರ ಸಂರಕ್ಷಣೆಯ ಅರಿವನ್ನು ಮೂಡಿಸಿದರು. ಹಾಗೆಯೇ ವಿದ್ಯಾರ್ಥಿಗಳು ಪರಿಸರ ಮತ್ತು ನೀರಿನ ಸಂರಕ್ಷಣೆಯ ಮಹತ್ವದ ಅರಿವು ಮೂಡಿಸುವ ಸಲುವಾಗಿ ಶಕ್ತಿ ನಗರದ ಜಂಕ್ಷನ್ನಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಿದರು.

ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಕುರಿತು ತರಗತಿಯಲ್ಲಿ ಚಟುವಟಿಕೆಗಳನ್ನು ನೀಡಲಾಯಿತು.

ಮಾತನಾಡಿದ ಅವರು ಜಗತ್ತಿನ ತಾಪಮಾನವು ಅಧಿಕವಾಗುತ್ತಿರುವ ಸಂದರ್ಭದಲ್ಲಿ ನಾವು ಜಾಗೃತರಾಗುವ ಅವಶ್ಯಕತೆಯಿದೆ. ನಾವು ನಮ್ಮ ಮನೆಯಲ್ಲಿ ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಬೇಕು. ನಾವೆಲ್ಲರೂ ನಮ್ಮ ಹುಟ್ಟು ಹಬ್ಬದ ದಿನ ಕೇಕ್ ಕಟ್ ಮಾಡುವುದರ ಜೊತೆಗೆ ಗಿಡ ನೆಟ್ಟಾಗ ಪರಿಸರದಲ್ಲಿ ಬದಲಾವಣೆ ಮಾಡಲು ಸಾಧ್ಯ ಎಂದು ಹೇಳಿದರು.