Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಈಜು ಸ್ಪರ್ಧೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ

ಮಂಗಳೂರು : ದ.ಕ.ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯು ಸಂತ ಫಿಲೋಮಿನ ಕಾಲೇಜು, ಪುತ್ತೂರು ಇಲ್ಲಿ ದಿನಾಂಕ 2-8-2024 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಬಾಲಕರು ವಿವಿಧ ಪದಕಗಳನ್ನು ಪಡೆದಿರುತ್ತಾರೆ.

ಶಕ್ತಿ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸ್ಟೀವ್ ಜೆಪ್ ಲೋಬೊ 2 ಚಿನ್ನದ ಪದಕ, 1 ಬೆಳ್ಳಿ ಪದಕ ಮತ್ತು 1 ಕಂಚಿನ ಪದಕ ಪಡೆದು ರಾಜ್ಯಮಟ್ಟಕ್ಕೆ ಅಯ್ಕೆಯಾಗಿರುತ್ತಾರೆ. ಅದೇ ರೀತಿ ಅರ್‍ಗ್ಯಾನ್ ನಾೖಕ್‌ ದ್ವಿತೀಯ ವಿಜ್ಞಾನ ವಿಭಾಗ 2 ಕಂಚಿನ ಪದಕ, ವಿಷ್ಣು ಪ್ರಥಮ ವಾಣಿಜ್ಯ ವಿಭಾಗ, ಶ್ರೇಯಸ್ ಪ್ರಥಮ ವಾಣಿಜ್ಯ ವಿಭಾಗ ತಲಾ 1 ಕಂಚಿನ ಪದಕ ಪಡೆದಿರುತ್ತಾರೆ.

ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್‌. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.