ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವ ಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆ ಹಾಗೂ ಆಯುಧ ಪೂಜೆ ನೆರವೇರಿತು. ಸಂಸ್ಥೆಯ ಎಲ್ಲಾ ಶಾಲಾ ಬಸ್ ಸೇರಿದಂತೆ ಸಿಬ್ಬಂದಿ ವರ್ಗದವರ ವಾಹನಗಳಿಗೆ ಆಯುಧ ಪೂಜೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ. ಸಿ. ನಾೖಕ್, ಆಡಳಿತ ಮಂಡಳಿ ಟ್ರಸ್ಟಿ ಶ್ರೀಮತಿ ಸಗುಣ ಸಿ. ನಾೖಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ವೆಂಕಟೇಶ ಮೂರ್ತಿ ಹೆಚ್., ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್, ಶಿಕ್ಷಕ-ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.