Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ನೀಟ್ 2025 ಪರೀಕ್ಷೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ವೈದ್ಯಕೀಯ ವಿಭಾಗದಲ್ಲಿ ಸಾಧನೆ

ನೀಟ್ 2025 ನಡೆಸಿರುವ ವೈದ್ಯಕೀಯ ಪದವಿ ಪರೀಕ್ಷೆಗಳಿಗೆ ನಡೆಸಿರುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಕ್ತಿ ಪಪೂ ಕಾಲೇಜಿನ 8 ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ.

ಶಕ್ತಿ ಪಪೂ ಕಾಲೇಜಿನ ವಿಜ್ಞಾನ ವಿಭಾಗದ ಅನುರಾಗ್ ಆರ್. ನಾೖಕ್‌- 550 ಅಂಕ (99.4359343 ಪರ್ಸೆಂಟೈಲ್)ನೊಂದಿಗೆ ರಾಷ್ಟ್ರಮಟ್ಟದಲ್ಲಿ 12265 ರ್‍ಯಾಂಕ್ ಪಡೆದಿರುತ್ತಾರೆ. ಸ್ವಪ್ನ – 575, ಅಶ್ವತ್ ಅಜಿತ್ ಪೈ – 510, ಮೌನ ಜಿ. – 510, ಅಭಿಜ್ಞ – 504, ವೃಷ್ಟಿ ಶೆಟ್ಟಿ – 479 ಹಾಗೂ ಸಂಜನ ರಾವ್ – 477 ಅಂಕಗಳನ್ನು ಗಳಿಸಿ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ನಮ್ಮ ಸಂಸ್ಥೆಯ ಒಟ್ಟು 49 ವಿದ್ಯಾರ್ಥಿಗಳು ನೀಟ್ 2025 ಪರೀಕ್ಷೆಯನ್ನು ಬರೆದ್ದಿದ್ದು ಇದರಲ್ಲಿ 7 ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುತ್ತಾರೆ. ಪ್ರತಿ 7 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ವೈದ್ಯಕೀಯ ವಿಭಾಗಕ್ಕೆ ಆಯ್ಕೆಯಾಗುತ್ತಿರುವುದಕ್ಕೆ ಸಂಸ್ಥೆಯ ಸಂಸ್ಥಾಪಕರು ಮತ್ತು ಆಡಳಿತಾಧಿಕಾರಿಗಳಾದ ಡಾ.ಕೆ.ಸಿ.ನಾೖಕ್‌ ರವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು. ಈ ಸಾಧನೆ ಮಾಡಲು ಶ್ರಮಿಸಿದ ಸಂಸ್ಥೆಯ ಉಪನ್ಯಾಸಕ ಮತ್ತು ಇತರ ಸಿಬ್ಬಂದಿ ವರ್ಗಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಪ್ರಧಾನ ಸಲಹೆಗಾರರಾದ ರಮೇಶ ಕೆ., ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟೇಶ್ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲರಾದ ಬಬಿತ ಸೂರಜ್, ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.