Phone : +91 0824 2230452
EMAIL : info@shakthi.net.in

ಶಕ್ತಿ ರೆಸಿಡೆನ್ಯಿಯಲ್ ಶಾಲೆಯ ವಾರ್ಷಿಕೋತ್ಸವ

ಶಕ್ತಿ ವಸತಿ ಶಾಲೆ, ಶಕ್ತಿನಗರ ಮಂಗಳೂರು ಇಲ್ಲಿ ಹಿರಿಯ ಪ್ರಾಥಮಿಕ ಹಾಗೂ ಶಕ್ತಿ ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವವು ನವೆಂಬರ್ 6 ರಂದು ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಎಸ್ ಎಲ್ ಭೋಜೇಗೌಡ ವಿಧಾನ ಪರಿಷತ್ ಸದಸ್ಯರು, ದಕ್ಷಿಣ ಪಶ್ಚಿಮ ಶಿಕ್ಷಕರ ವಿಧಾನ ಪರಿ?ತ್ ಕ್ಷೇತ್ರ, ಕರ್ನಾಟಕ ಸರ್ಕಾರ ಇವರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

“ವೆನ್ ಬುಕ್ಸ್ ಕಮ್ ಅಲೈವ್” ಅಂದರೆ “ಪುಸ್ತಕಗಳು ಜೀವಂತವಾಗುವಾಗ” ಎಂಬ ವಿಶಿಷ್ಟವಾದ ಥೀಮ್ ಅನ್ನು ಹೊಂದಿದ್ದ ಈ ವಾರ್ಷಿಕೋತ್ಸವದ ಉದ್ಘಾಟನೆಯು ವಿಭಿನ್ನವಾಗಿದ್ದು ಮುಖ್ಯ ಅತಿಥಿಗಳು ಪುಸ್ತಕವನ್ನು ತೆರೆಯುವ ಮೂಲಕ ಉದ್ಘಾಟನೆಯನ್ನು ನೆರವೇರಿಸಿದರೆ ಆ ಪುಸ್ತಕದಿಂದ ಅದೆಷ್ಟೋ ಕಥೆಗಳ ಪಾತ್ರಗಳು ಹೊರಬಂದಿರುವುದು ನೋಡುಗರ ಗಮನಸೆಳೆಯುವಂತಿತ್ತು. ಬಳಿಕ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಬಬಿತಾ ಸೂರಜ್ ಅವರು 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಫಲಕಗಳನ್ನು ವಿತರಿಸುವ ಮೂಲಕ ಪ್ರೋತ್ಸಾಹಿಸಲಾಯಿತು.

ಬಳಿಕ ಮಾತನಾಡಿದ ಮುಖ್ಯ ಅತಿಥಿಗಳಾದ ಶ್ರೀ ಎಸ್ ಎಲ್ ಭೋಜೇಗೌಡ ಅವರು ಶಿಕ್ಷಣ ಅಂದರೆ ಕೇವಲ ಪಠ್ಯಪುಸ್ತಕದ ವಿಷಯದ ಕುರಿತು ಪರೀಕ್ಷೆ ಬರೆದು ರ್‍ಯಾಂಕ್ ಗಳಿಸುವುದು ಮಾತ್ರವಲ್ಲ, ಸಂಸ್ಕಾರದ ಶಿಕ್ಷಣ ಇಂದು ಸಮಾಜಕ್ಕೆ ಬಹಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಒಂದು ಮಗುವಿನ ಸಮಗ್ರ ವ್ಯಕ್ತಿತ್ವದ ಬೆಳವಣಿಗೆಗೆ ಇಂದು ಶಕ್ತಿ ಶಾಲೆಯು ದಾರಿದೀಪವಾಗಿದೆ. ಇಲ್ಲಿನ ಮಕ್ಕಳ ಸಂಸ್ಕಾರವನ್ನು ನೋಡುವಾಗಲೇ ಅದು ಗೋಚರಿಸುತ್ತದೆ. ಇಲ್ಲಿ ಕಲಿಯುತ್ತಿರುವ ಪ್ರತಿಯೊಂದು ಮಗುವೂ ಸಮಾಜದ ಆಸ್ತಿಯಾಗಬೇಕು ಎಂದರು. ಸಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಈ ಶಕ್ತಿ ಶಾಲೆಯಂತಹ ವಿದ್ಯಾಸಂಸ್ಥೆಗಳ ಪಾತ್ರ ಮಹತ್ತರವಾದದ್ದು ಎಂದರು. ನಂತರ ವೇದಿಕೆಯಲ್ಲಿದ್ದ ಎಲ್ಲಾ ಗಣ್ಯರು ಸೇರಿ ಮುಖ್ಯ ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿಯಾಗಿರುವ ಡಾ. ಕೆ. ಸಿ. ನಾೖಕ್‌ ಅವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನಮ್ಮ ಶಕ್ತಿ ಮೀರಿ ಶ್ರಮಿಸಲು ನಾವು ಸದಾ ಸಿದ್ಧರಿದ್ದೇವೆ, ಅದಕ್ಕೆ ಪೋಷಕರಾದ ನಿಮ್ಮ ಸಹಕಾರ ನಮಗೆ ತುಂಬಾ ಅಮೂಲ್ಯವಾದದ್ದು ಎಂದು ಹೇಳುತ್ತಾ ವಿದ್ಯಾರ್ಥಿಗಳ ಭವ್ಯ ಭವಿಷ್ಯಕ್ಕೆ ಶುಭವನ್ನು ಹಾರೈಸಿದರು.

ಶಕ್ತಿ ವಿದ್ಯಾ ಸಂಸ್ಥೆಯ ಟ್ರಸ್ಟಿಯಾಗಿರುವ ಶ್ರೀಮತಿ ಸಗುಣ ಸಿ ನಾೖಕ್‌, ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ ಶ್ರೀ ರಮೇಶ್ ಕೆ., ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ವೆಂಕಟೇಶ್ ಮೂರ್ತಿ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಬಬಿತಾ ಸೂರಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಕ್ತಿ ವಸತಿ ಶಾಲೆಯ ಶಿಕ್ಷಕಿ ಶ್ರೀಮತಿ ಚೇತನಾ ತಲಪಾಡಿ ಅತಿಥಿಗಳನ್ನು ಸ್ವಾಗತಿಸಿದರು, ಶಿಕ್ಷಕಿ ಶ್ರೀಮತಿ ಸ್ಮಿಷಾ ವಿನಿಲ್ ಧನ್ಯವಾದವನ್ನು ಸಮರ್ಪಿಸಿದರು. ಶಕ್ತಿ ವಸತಿ ಶಾಲೆಯ ಶಿಕ್ಷಕಿ ಶ್ರೀಮತಿ ಅರುಣೀತ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಕ್ತಿ ಶಾಲಾ ವಿದ್ಯಾರ್ಥಿಗಳಿಂದ ಪ್ರದರ್ಶಿಸಲ್ಪಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವೀಕ್ಷಕರ ಕಣ್ಮನ ಸೆಳೆಯುವಂತಿತ್ತು.

Announcements

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...