Phone : +91 0824 2230452
EMAIL : info@shakthi.net.in

ಶಕ್ತಿ ವಸತಿ ಶಾಲೆಯಲ್ಲಿ ಶಕ್ತಿ ಕೌಶಲ್ಯ ಮೇಳ 2026

ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಮಂಗಳೂರು ಶಕ್ತಿ ಕೌಶಲ್ಯ ಮೇಳ 2026 ಕಾರ್ಯಕ್ರಮವು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿಬಿಎಸ್‌ಇ ನಗರ ಸಂಯೋಜಕಿ ಹಾಗೂ ಎಸ್.ಡಿ.ಎಂ. ಶಾಲೆ ಮಂಗಳೂರು ಇಲ್ಲಿನ ಪ್ರಾಂಶುಪಾಲರು ಆಗಿರುವ ಶ್ರೀಮತಿ ಜಾಯ್ ಜೀವನ್ ರೈ ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ರಿಬ್ಬನ್ ಕತ್ತರಿಸಿ ಶಕ್ತಿ ಕೌಶಲ್ಯ ಮೇಳ 2026 ರ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಶಕ್ತಿ ಕೌಶಲ್ಯ ಮೇಳದಂತಹ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಕೌಶಲ್ಯವನ್ನು ಸಮಾಜಕ್ಕೆ ಪರಿಚಯಿಸಲು ತುಂಬಾ ಸಹಕಾರಿಯಾಗುತ್ತದೆ. ಎಲ್ಲಾ ಶಾಲೆಗಳು ಇಂತಹ ಕಾರ್ಯಕ್ರಮವನ್ನು ಮಾಡಿದರೆ ಭವಿಷ್ಯದಲ್ಲಿ ನಮ್ಮ ಭಾರತವು ಸ್ಕಿಲ್ ಡೆವೆಲಪ್ಡ್ ದೇಶವಾಗುವುದರಲ್ಲಿ ಸಂದೇಹವಿಲ್ಲ ಎಂದರು. ಅಷ್ಟೇ ಅಲ್ಲದೆ ಶಕ್ತಿ ಶಾಲೆಯ ವಿದ್ಯಾರ್ಥಿಗಳ ಉತ್ಸಾಹ ಹುಮ್ಮಸ್ಸನ್ನು ನೋಡಿ ನನಗೆ ತುಂಬಾ ಖುಷಿ ಆಯಿತು ಎಂದರು. ಬಳಿಕ ವೇದಿಕೆಯಲ್ಲಿದ್ದ ಎಲ್ಲಾ ಗಣ್ಯರು ಸೇರಿ ಮುಖ್ಯ ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿಯಾಗಿರುವ ಡಾ ಕೆ. ಸಿ. ನಾೖಕ್‌ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಕ್ತಿ ವಸತಿ ಶಾಲೆಯ 3 ನೇ ತರಗತಿಯಿಂದ 7ನೇ ತರಗತಿಯವರೆಗಿನ ವಿದ್ಯಾರ್ಥಿಗಳು ತಾವು ತಯಾರಿಸಿರುವ ಕೌಶಲ್ಯಭರಿತ ವಸ್ತುಗಳ ಪ್ರದರ್ಶನ ಹಾಗೂ ಮಾರಾಟವನ್ನು ಮಾಡಿದರು. ಸಣ್ಣ ಪ್ರಾಯದಲ್ಲಿಯೇ ವ್ಯಾವಹಾರಿಕ ಜ್ಞಾನವನ್ನು ಕೊಡುವುದು ಶಕ್ತಿ ಕೌಶಲ್ಯ ಮೇಳದ ಉದ್ದೇಶವಾಗಿದೆ. ಒಟ್ಟು 85 ವಿವಿಧ ರೀತಿಯ ಆಹಾರ, ಪರಿಸರ, ಕೌಶಲ್ಯ ಭರಿತ ಸ್ಟಾಲ್‌ಗಳಲ್ಲಿ ವಿದ್ಯಾರ್ಥಿಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗೆಗಳನ್ನು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಖುಷಿಯನ್ನು ಸಂಭ್ರಮಿಸಿದರು.

ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ ಶ್ರೀ ರಮೇಶ್ ಕೆ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟೇಶ್ ಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಬಬಿತಾ ಸೂರಜ್ ಹಾಗೂ ಎಸ್‌ಡಿಎಮ್ ಶಾಲೆಯ ಸಂಯೋಜಕಿ ಉಷಾ ಹೆಗ್ಡೆ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಕ್ತಿ ವಸತಿ ಶಾಲೆಯ ಶಿಕ್ಷಕಿ ಶ್ರೀಮತಿ ಚೇತನಾ ತಲಪಾಡಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Announcements

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...