Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆಗೆ ದಿ ಇಂಡಿಯನ್ ಫೋರಮ್‌ನಿಂದ ಅಂತರಾಷ್ಟ್ರೀಯ ವಿಮೆನ್ ಲೀಡರ್‌ಶಿಪ್ ಎಕ್ಸೆಲೆನ್ಸ್ ಅವಾರ್ಡ್

ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸುರಜ್ ಅವರಿಗೆ ಸಾಮಾಜಿಕ ಮುಖಂಡರು ಮತ್ತು ಸಾಧಕರಿಗಾಗಿ “ದಿ ಇಂಡಿಯನ್ ಫೋರಮ್” ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ವಿಮೆನ್ ಲೀಡರ್‌ಶಿಪ್ ಎಕ್ಸೆಲೆನ್ಸ್ ಅವಾರ್ಡ್”ನ್ನು ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಅತ್ಯುತ್ತಮ ಸಾಧನೆಗಳು, ಸಮರ್ಪಣೆ, ನಾಯಕತ್ವ ಮತ್ತು ಸಮಾಜಕ್ಕೆ ಸ್ಪೂರ್ತಿದಾಯಕ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ಅವರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್‌. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದರು.