Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಫಾದರ್‍ಸ್ ಡೇ ಕಾರ್ಯಕ್ರಮ

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಇಂದು ಫಾದರ್‍ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ತಂದೆಯಂದಿರು ತುಂಬಾ ಉತ್ಸಾಹದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ವಿಶೇಷವಾಗಿತ್ತು. ಇವರಿಗೆ ವಿವಿಧ ತರದ ಆಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ. ಮಾತನಾಡಿ ಒಂದು ಮಗುವಿನ ಬೆಳವಣಿಗೆಯಲ್ಲಿ ತಾಯಿ ಶ್ರಮದ ಜೊತೆ ತಂದೆಯ ಶ್ರಮವು ಇದೆ. ತಂದೆಯು ಅವರ ದುಡಿಮೆಯ ಜೊತೆ ಮಗುವಿಗೂ ಹೆಚ್ಚು ಸಮಯವನ್ನು ಕೊಟ್ಟು ಅವರನ್ನು ಪ್ರೋತ್ಸಾಹಿಸುತ್ತಿರುತ್ತಾರೆ. ಇಂದು ಈ ಕಾರ್ಯಕ್ರಮದ ಮೂಲಕ ಎಲ್ಲ ಮಕ್ಕಳ ತಂದೆಯಂದಿರು ತುಂಬಾ ಖುಷಿಯಿಂದ ಭಾಗವಹಿಸಿರುವುದು ಅಭಿನಂದನೀಯವಾಗಿದೆ ಎಂದು ಹೇಳಿದರು.

ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ಡಾ. ಸುರೇಖಾ ಭಟ್ ಮಾತನಾಡಿ ಮಗುವಿಗೆ ಸಂಸ್ಕಾರವನ್ನು ಶಾಲೆಯಲ್ಲಿ ಶಿಕ್ಷಕರು ಮತ್ತು ಮನೆಯಲ್ಲಿ ಪೋಷಕರು ನೀಡಬೇಕು. ಮಗುವಿನ ಜೊತೆಯಲ್ಲಿಯೇ ಕುಟುಂಬ ಸದಸ್ಯರು ಒಟ್ಟಿಗೆ ಊಟ ಮಾಡುವುದರ ಮೂಲಕ ಕುಟುಂಬವನ್ನು ಬಲವರ್ದನೆ ಮಾಡಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ನಿರಂತರವಾಗಿ ನಾವೆಲ್ಲರೂ ಒಟ್ಟಾಗಿ ಮಾಡಬೇಕೆಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಕೆ.ಸಿ ನಾಕ್ ವಹಿಸಿ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಸ್ವಾಗತವನ್ನು ಶ್ರೀಮತಿ ರೇಣುಕ ಹಾಗೂ ಶ್ರೀಮತಿ ಪೂಜರವರು ವಂದಿಸಿ, ನಿರೂಪಿಸಿದರು.