Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಿಕ್ಷಣದಲ್ಲಿ ಪೋಷಕರ ಪಾತ್ರ – ವಿಶೇಷ ಉಪನ್ಯಾಸ

ಮಂಗಳೂರು : ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜಿನ ವತಿಯಿಂದ ದಿನಾಂಕ 15-12-2018 ರಂದು ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣದಲ್ಲಿ ಪೋಷಕರ ಪಾತ್ರ ಎಂಬ ವಿಷಯದ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ವಿಶೇಷ ಉಪನ್ಯಾಸವನ್ನು ಡಾ. ವಿರೂಪಾಕ್ಷ ದೇವರಮನೆ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಉಡುಪಿಯ ಖ್ಯಾತ ಮನಶಾಸ್ತ್ರಜ್ಞ ಇವರು ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ. ನಾೖಕ್‌ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಕ್ತಿ ವಸತಿಯುಕ್ತ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಕಾಮತ್, ಶಕ್ತಿ ಪ. ಪೂ. ಕಾಲೇಜಿನ ಪ್ರಾಂಶುಪಾಲರಾದ ಪ್ರಭಾಕರ ಜಿ.ಎಸ್., ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಪ್ರಧಾನ ಸಲಹೆಗಾರ ರಮೇಶ್ ಕೆ. ಮತ್ತು ಅಭಿವೃದ್ಧಿ ಅಧಿಕಾರಿ ನಸೀಮ ಬಾನು ಉಪಸ್ಥಿತರಿರುತ್ತಾರೆ.