ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಯ ಅತ್ಯುತ್ತಮ ಸಾಧನೆ
ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ವತಿಯಿಂದ ಹೈದರಾಬಾದ್ ನಾದೇರ್ಗುಲ್ನಲ್ಲಿರುವ ವಿದ್ಯಾಭಾರತಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಸೆಪ್ಟೆಂಬರ್ 4 ರಿಂದ 7, 2026 ರವರೆಗೆ ಆಯೋಜಿಸಲಾದ ದಕ್ಷಿಣ ಮಧ್ಯ ಕ್ಷೇತ್ರ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿ ವಿಷ್ಣು ರೆಡ್ಡಿ ನಿಂಗಪ್ಪ ಬಿರಾದರ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

17 ವರ್ಷದೊಳಗಿನ ಬಾಲಕರ ವಿಭಾಗದ 400 ಮೀಟರ್ ಓಟದಲ್ಲಿ ಕಂಚಿನ ಪದಕ ಹಾಗೂ 4400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ಶಾಲೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಯ ಈ ಅತ್ಯುತ್ತಮ ಸಾಧನೆಗೆ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್ ಕಾರ್ಯದರ್ಶಿಗಳಾದ ಶ್ರೀ ಸಂಜಿತ್ ನಾೖಕ್, ಪ್ರಧಾನ ಸಲಹೆಗಾರರಾದ ಶ್ರೀಯುತ ರಮೇಶ್ ಕೆ. ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸುರೇಖಾ ಭಟ್ ಅವರು ವಿದ್ಯಾರ್ಥಿಯನ್ನು ಅಭಿನಂದಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಇನ್ನಷ್ಟು ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ವಿಜೇತ ವಿದ್ಯಾರ್ಥಿಗೆ ಹೃತ್ಪೂರ್ವಕ ಅಭಿನಂದನೆಗಳು.