Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ನಾಳೆ ಬಲಿದಾನ ದಿವಸದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಮಂಗಳೂರು ಮಾ. 22 : ಶಕ್ತಿನಗರದ ಶಕ್ತಿ ಪ ಪೂ ಕಾಲೇಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವತಿಯಿಂದ ದಿನಾಂಕ 23-03-2021 ರಂದು ಮಧ್ಯಾಹ್ನ 2 ಗಂಟೆಗೆ ಬಲಿದಾನ ದಿವಸದ ಪ್ರಯುಕ್ತ ಮತ್ತೆ ನೆನಪಾಗುವ ಅಮರ ಬಲಿದಾನಿಗಳು ಪರಮವೀರ ಚಕ್ರ ಪುರಸ್ಕೃತ ಯೋಧರ ಸಂಸ್ಮರಣೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉಪನ್ಯಾಸಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಶ್ರೀ ರಾಜೇಶ್ ಪದ್ಮಾರ್ ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿಯಾದ ಡಾ. ಕೆ.ಸಿ. ನಾೖಕ್ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್, ಪ್ರಧಾನ ಸಲಹೆಗಾರ ರಮೇಶ್ ಕೆ., ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಕ್ಯಾತ್‌ ರೈ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾಕಾಮತ್ ಜಿ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಧೀರ್ ಎಂ.ಕೆ., ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜಕಿ ನೀಮಾ ಸಕ್ಸೇನಾ ಉಪಸ್ಥಿತರಿರುತ್ತಾರೆ.