ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್ ಅವರಿಗೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರಿ) ಕರ್ನಾಟಕ, ರುಪ್ಸಾ ಕರ್ನಾಟಕ (RUPSA KARNATAKA) ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಶಿಕ್ಷಣ ಭೀಷ್ಮ ಪ್ರಶಸ್ತಿ ನೀಡಿ ಗೌರವಿಸಿರುತ್ತಾರೆ.
ಡಾ.ಕೆ.ಸಿ.ನಾೖಕ್ ಶಕ್ತಿ ಶಿಕ್ಷಣ ಸಂಸ್ಥೆಯನ್ನು ಮಂಗಳೂರಿನಲ್ಲಿ ಪ್ರಾರಂಭ ಮಾಡುವುದರ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾಗಿರುವ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ರಾಜ್ಯದ 31 ಜಿಲ್ಲೆಗಳ ವಿದ್ಯಾರ್ಥಿಗಳು ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವುದು ವಿಶೇಷ. ಇವರು ಮಕ್ಕಳಿಗೆ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಪರಿಚಯಿಸುವ ಕಾರ್ಯದ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯು ದೇಶದ ಸಂಪತ್ತಾಗಬೇಕೆಂಬ ಕನಸ್ಸನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಉತ್ತಮ ಮೂಲಭೂತ ಸೌಕರ್ಯಗಳೊಂದಿಗೆ ಉತ್ತಮ ವಿದ್ಯಾಭ್ಯಾಸವನ್ನು ಕೊಡುತ್ತಿದ್ದಾರೆ.
ಸಾವಿರಾರು ಮಕ್ಕಳು ಈ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ರುಪ್ಸಾ ಕರ್ನಾಟಕದ ರಾಜ್ಯ ಅಧ್ಯಕ್ಷರಾದ ಲೋಕೇಶ್ ತಾಲಿಕಟ್ಟೆ ಮತ್ತು ರುಪ್ಸಾ ಕರ್ನಾಟಕದ ಉಪಾಧ್ಯಕ್ಷರಾದ ಮಂಜುನಾಥ್ ರೇವಣಕರ್ ಉಪಸ್ಥಿತರಿದ್ದರು.
ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜೀತ್ ನಾೖಕ್, ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪಪೂ ಕಾಲೇಜು ಪ್ರಾಂಶುಪಾಲರಾದ ವೆಂಕಟೇಶಮೂರ್ತಿ ಮತ್ತು ಶಕ್ತಿ ರೆಸಿಡೆನ್ಸಿಯಲ್ ಶಾಲೆ ಪ್ರಾಂಶುಪಾಲೆ ಬಬಿತಾ ಸೂರಜ್ ಇವರು ಡಾ.ಕೆ.ಸಿ.ನಾೖಕ್ ಅವರಿಗೆ ಈ ಸಂದರ್ಭದಲ್ಲಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.