Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಷ್ಟೀಯ ಯೂತ್ ಬಾಕ್ಸಿಂಗ್ ತರಬೇತಿ ಶಿಬಿರಕ್ಕೆ ಆಯ್ಕೆ

ಮಂಗಳೂರು ಅ. 12 : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಶಾರ್ವಿ ಆರ್. ಶೆಟ್ಟಿ ಇವರು ಹರಿಯಾಣದ ರೋಹ್ತಕ್‌ನಲ್ಲಿ ನಡೆಯುವ ರಾಷ್ಟ್ರೀಯ ಯೂತ್ ಬಾಕ್ಸಿಂಗ್ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿರುತ್ತಾರೆ. ಈ ತರಬೇತಿ ಶಿಬಿರವು 15 ದಿನಗಳ ಕಾಲ ನಡೆಯಲಿದೆ.

ಶಾರ್ವಿ ಆರ್ ಶೆಟ್ಟಿ ಇತ್ತೀಚೆಗೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ 6ನೇ ಮಹಿಳಾ ಯೂತ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು ಪಡೆದಿದ್ದರು ಹಾಗೂ ಇಲ್ಲಿ ನೀಡಿದ ಪ್ರದರ್ಶನವನ್ನು ಪರಿಗಣಿಸಿ ಈ ಶಿಬಿರದಲ್ಲಿ ಪಾಲ್ಗೊಳ್ಳುವ ಅವಕಾಶ ನೀಡಲಾಗಿದೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್‌ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.