Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಕಾಲೇಜಿನ ಶಾರ್ವಿ ಶೆಟ್ಟಿಗೆ ಬಾಕ್ಸಿಂಗ್‌ನಲ್ಲಿ ಚಿನ್ನ

ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವೀತಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶಾರ್ವಿ ಆರ್ ಶೆಟ್ಟಿ ಹಾಗೂ ಮಯೂರ್ ಡಿ ಶೆಟ್ಟಿ ಇವರು ಬೆಳಗಾಂನಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಕ್ಸಿಂಗ್ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ್ದಾರೆ ಹಾಗೂ ಕುಮಾರಿ ಶಾರ್ವಿ ಆರ್ ಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದು SGFI ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.