Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿ ಚೆಸ್‌ನಲ್ಲಿ ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರು ನ. 16 : ಶಕ್ತಿ ವಸತಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಸುಶಾಂತ್ ವಾಮನ ಶೆಟ್ಟಿ ಇವರು ಅಸ್ಸಾಂನಲ್ಲಿ ನಡೆದ ವಿದ್ಯಾ ಭಾರತಿ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ ಹಾಗೂ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.