Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಶಿಕ್ಷಣ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ ನಿಮಿತ್ತ ನಿವೃತ್ತ ರಾಜ್ಯಶಾಸ್ತ್ರ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು : ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪ.ಪೂ. ಕಾಲೇಜಿನ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕರಾದ ಡಾ. ಪಿ. ಅನಂತ ಕೃಷ್ಣ ಭಟ್‌ರವರಿಗೆ ಸನ್ಮಾನ ಕಾರ್ಯಕ್ರಮವನ್ನು ದಿನಾಂಕ 6-9-2021 ಮಧ್ಯಾಹ್ನ 2.30 ಕ್ಕೆ ರೇಷ್ಮ ಮೆಮೊರಿಯಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾ. ಗಣೇಶ್‌ ಕಾರ್ಣಿಕ್ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಉತ್ತರ ಶಿಕ್ಷಕರ ಕ್ಷೇತ್ರ, ಕರ್ನಾಟಕ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜ್ಯುಕೇಶನ್‌ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ. ಕೆ.ಸಿ. ನಾೖಕ್‌ ವಹಿಸಲಿದ್ದಾರೆ.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ, ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್‌ ರೈ, ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲರಾದ ಟಿ. ರಾಜಾರಾಮ್‌ರಾವ್, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾಕಾಮತ್ ಜಿ, ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿರುತ್ತಾರೆ.