Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ ಶಕ್ತಿ ಸಂಸ್ಥೆಗೆ ಪ್ರಶಸ್ತಿ

ಮಂಗಳೂರು : ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯ ಸಹಯೋಗದೊಂದಿಗೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶಕ್ತಿ ವಸತಿ ಶಾಲೆಯ 14 ವರ್ಷದೊಳಗಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಅದೇ ರೀತಿ 17 ವರ್ಷದೊಳಗಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ.

ಈ ಸಂದರ್ಭದಲ್ಲಿ ಕಾಲೇಜಿನ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್‌. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.