Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

Guruvandana Program 2019

ಶಕ್ತಿ ವಸತಿ ಶಾಲೆ ಹಾಗೂ ಪದವಿ ಪೂರ್ವಕಾಲೇಜಿನಲ್ಲಿ ಗುರುವಂದನ ಕಾರ್ಯಕ್ರಮ

ಗುರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯನ್ನು ನೀಡುವ ವ್ಯಕ್ತಿ, ಜೊತೆಗೆ ವಿದ್ಯಾರ್ಥಿಗಳ ಬದುಕನ್ನು ಪರಿವರ್ತಿಸುವ ಶಕ್ತಿಯೂ ಹೌದು. ಒಂದು ಮಗುವಿಗೆ ಮನೆ, ಸಂಸ್ಕಾರವನ್ನು ತಿಳಿಸಿಕೊಡುತ್ತದೆ. ಶಾಲೆ ಶಿಕ್ಷಣವನ್ನು ನೀಡುತ್ತದೆ. ಆದರೆ ಒಬ್ಬ ಉತ್ತಮ ಶಿಕ್ಷಕ ಆ ಮಗುವಿನ ಬದುಕಿನಲ್ಲಿ ಪ್ರಮುಖ ಪಾತ್ರ ವಹಿಸಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಸಫಲನಾಗುತ್ತಾನೆ ಎಂದು ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಚಾರ್ಯರಾದ ಪ್ರಭಾಕರ ಜಿ.ಎಸ್. ದಿನದ ಮಹತ್ವವನ್ನು ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿಜಿಲ್ಲಾ ಮಟ್ಟದಲ್ಲಿಉತ್ತಮ ಶಿಕ್ಷಕರಾಗಿ ಆಯ್ಕೆಗೊಂಡ ನಿವೃತ್ತ ಶಿಕ್ಷಕರಾದ ಯು. ಗೋಪಾಲಕೃಷ್ಣ ಭಟ್, ವಿಮಲಾ ಬಾಯಿ, ವೀಣಾ ಬಿ., ಪಶುಪತಿ ಶಾಸ್ತ್ರಿ, ಸೋಮಶೇಖರ ಶೆಟ್ಟಿ ಇವರನ್ನು ಗುರುತಿಸಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ವಿದ್ಯಾಕಾಮತ್ ಜಿ. ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಗುರುಗಳ ಪ್ರೀತಿ, ವಿಶ್ವಾಸಗಳಿಸಿ ಅವರನ್ನು ಆದರದಿಂದ ನೋಡಬೇಕು ಎಂದು ಕರೆಯಿತ್ತರು.

ಆರಂಭದಲ್ಲಿ ಶಕ್ತಿ ಎಜ್ಯುಕೇಶನ್‌ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಸ್ವಾಗತಿಸಿದರು. ಪ್ರಾಧ್ಯಾಪಕಿ ಹರ್ಷಿತಾ ಕೊನೆಯಲ್ಲಿ ವಂದಿಸಿದರು. ಶಿಕ್ಷಕಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ. ನಾೖಕ್‌,, ಶಕ್ತಿ ಎಜ್ಯುಕೇಶನ್‌ಟ್ರಸ್ಟ್‌ನ ಪ್ರಧಾನ ಸಲಹೆಗಾರ ರಮೇಶ್ ಕೆ., ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಂ ಬಾನು, ಗೋಪಾಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು.