Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಆಮಂತ್ರಣ : ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಹೊಸ ಕಟ್ಟಡದ ಭೂಮಿ ಪೂಜೆ

ಮಂಗಳೂರು ಅ. 26 : ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಗೊಳಪಟ್ಟ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಹೊಸ ಕಟ್ಟಡದ ಭೂಮಿ ಪೂಜೆಯು ದಿನಾಂಕ : 27-10-2023 ರಂದು ಬೆಳಗ್ಗೆ 10 ಗಂಟೆಗೆ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಆವರಣದಲ್ಲಿ ನೆರವೆರಲಿದೆ.

ಈ ಕಾರ್ಯಕ್ರಮದ ಭೂಮಿ ಪೂಜೆಯನ್ನು ಅಜೇಕರ್ ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಮತ್ತು ಜ್ಞಾನ ಸುಧಾ ಸಂಸ್ಥೆ ಕಾರ್ಕಳದ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ನೆರವೆರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಟ್ರಸ್ಟಿ ಮುರಳೀಧರ್ ನಾೖಕ್‌, ಪ್ರಧಾನ ಸಲಹೆಗಾರ ರಮೇಶ್ ಕೆ, ಶಕ್ತಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟೇಶ್ ಮೂರ್ತಿ ಕೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲರಾದ ಶ್ರೀ ರವಿಶಂಕರ್ ಹೆಗಡೆ, ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜಕಿ ಶ್ರೀಮತಿ ಪೆಟ್ರಿಷಿಯ ಪಿಂಟೋ ಉಪಸ್ಥಿತರಿರುತ್ತಾರೆ.