Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಲಿಪಿಗಳ ರಾಣಿ ಕನ್ನಡ – ಪ್ರೊ. ಧನಂಜಯ ಕುಂಬ್ಳೆ

ಮಂಗಳೂರು ನ. 1 : ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪ್ರಿ ಸ್ಕೂಲ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವತಿಯಿಂದ ಆಯೋಜಿಸಲಾಗಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮುಖ್ಯ ಅತಿಥಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಧನಂಜಯ ಕುಂಬ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಕನ್ನಡ ಕೇವಲ ಭಾಷೆಯಲ್ಲ ಅದು ಕನ್ನಡಿಗರ ಸಂಸ್ಕೃತಿ, ಸಂಸ್ಕಾರ ಅದನ್ನು ಬಳಸಿ, ಬೆಳೆಸಿ, ಉಳಿಸುವುದು ನಮ್ಮೆಲ್ಲರ ಕರ್ತವ್ಯ. ಅಂತಹ ಜೀವ ಧ್ವನಿ ಕನ್ನಡ ಭಾಷೆಯ ಬಗ್ಗೆ ಇಂದಿನ ಯುವ ಜನಾಂಗಕ್ಕೆ ಒಲವು ಅಭಿಮಾನ ಇರಬೇಕು ಎಂದು ಹೇಳಿದರು.

ಇಂದು ದೇಶಾದಾದ್ಯಂತ ಆವರಿಸುವ ಅನ್ಯ ಭಾಷೆ ಹಾಗೂ ಸಂಸ್ಕೃತಿಯ ದಾಳಿ ನಮ್ಮ ಕನ್ನಡ ಭಾಷೆ ಸಂಸ್ಕೃತಿಯ ಮೇಲೆ ತನ್ನ ಪ್ರಭಾವ ಬೀರಿದೆ. ಈ ನಿಟ್ಟಿನಲ್ಲಿ ಕನ್ನಡಿಗರು ಮಾತೃ ಭಾಷೆಗೆ ಗೌರವ ನೀಡಿ ಅದಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಹೇಳಿದರು.

ಕನ್ನಡ ಭಾಷೆಯು ಲಿಪಿಗಳ ರಾಣಿ ಅಂತಹ ಸುಂದರ ಅಕ್ಷರ ಈ ಭಾಷೆಯಲ್ಲಿದೆ. ನಮ್ಮ ನೆರೆಯ ಕಾಸರಗೋಡಿನ ಪರಿಸ್ಥಿತಿ ನೋಡಿದರೆ ಕನ್ನಡ ನಿರ್ಣಾಮವಾಗುವ ಸ್ಥಿತಿಗೆ ತಲುಪಿರುವುದು ನೋವಿನ ವಿಚಾರವೆಂದು ಬೇಸರ ವ್ಯಕ್ತಪಡಿಸಿದರು.

ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ರಾಜ್ಯೋತ್ಸವ ಸಂದೇಶವನ್ನು ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕನ್ನಡ ಗಾಯನ ಹಾಗೂ ನೃತ್ಯವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾೖಕ್‌ ಅಧ್ಯಕ್ಷತೆ ವಹಿಸಿದ್ದರು, ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಸುಗಣ ಸಿ. ನಾೖಕ್‌, ಪ್ರಧಾನ ಸಲಹೆಗಾರ ರಮೇಶ್ ಕೆ, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪ. ಪೂ. ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ. ಎಸ್., ಶ್ರೀ ಗೋಪಾಲಕೃಷ್ಣ ಪ್ರಿ ಸ್ಕೂಲ್ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಾಗತವನ್ನು ಕನ್ನಡ ಅಧ್ಯಪಕಿ ಅಕ್ಷತಾ, ನಿರೂಪಣೆಯನ್ನು ಕನ್ನಡ ಅಧ್ಯಾಪಕಿ ಶಶಿಕಲಾ ಎಂ.ಎನ್ ಮತ್ತು ವಂದನಾರ್ಪಣೆಯನ್ನು ಸಂಸ್ಕೃತ ಅಧ್ಯಾಪಕರಾದ ಶ್ರೀನಿಧಿ ನೆರೆವೇರಿಸಿದರು.