ಶಕ್ತಿ ವಿದ್ಯಾ ಸಂಸ್ಥೆ ಶಕ್ತಿನಗರದಲ್ಲಿ ಓಣಂ ಪ್ರಯುಕ್ತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ವಿವಿಧ ಹೂಗಳಿಂದ ರಂಗೋಲಿಯನ್ನು ಹಾಕಿ ಹಾಗೂ ತಿರುವಾತಿರ ಕಲಿ ನೃತ್ಯ ಮಾಡುವುದರ ಮೂಲಕ ಆಚರಿಸಲಾಯಿತು.
ದಿನದ ವಿಶೇಷತೆಯಾಗಿ ಓಣಂ ಖಾದ್ಯವನ್ನು ವಿದ್ಯಾರ್ಥಿಗಳಿಗೆ ಸಿಬ್ಬಂದಿಗಳಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಶಕ್ತಿ ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಡಾ.ಕೆ.ಸಿ ನಾೖಕ್, ಪ್ರಧಾನ ಸಲಹೆಗಾರರಾದ ರಮೇಶ ಕೆ., ಶಕ್ತಿ ಪ ಪೂ ಕಾಲೇಜು ಪ್ರಾಂಶುಪಾಲರಾದ ವೆಂಕಟೇಶಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ಬಬಿತ ಸೂರಜ್ ಹಾಗೂ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.