Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭ

ನಾಯಕನು ಶಾಲೆಯ ನಾಲ್ಕು ಕೋಣೆಯಿಂದ ಹುಟ್ಟುತ್ತಾನೆ. ಅದಕ್ಕೆ ಶಿಕ್ಷಕರ ಪರಿಶ್ರಮ ಕೊಡುಗೆಯೂ ಅಷ್ಟೇ ಮಹತ್ವವಾದುದು. ಶಾಲೆಯ ನಾಯಕತ್ವ ವಹಿಸಿ ಜವಾಬ್ದಾರಿಯನ್ನು ನಿಭಾಯಿಸುವ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಗುರಿಯು ಸ್ಪಷ್ಟವಾಗುತ್ತದೆ ಎಂದು ಬೆಸೆಂಟ್ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ರೂಪಾಕ್ಷ ಶನಿವಾರ ಶಕ್ತಿನಗರ ಶಕ್ತಿ ವಸತಿ ಶಾಲೆಯಲ್ಲಿ ನಡೆದ ಶಾಲಾ ಸಂಸತ್ತು 2019-20 ರ ಪದವಿ ದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲಾ ನಾಯಕನು ಇತರ ವಿದ್ಯಾರ್ಥಿಗಳಿಗೆ ಮಾದರಿ ಆಗುವುದಲ್ಲದೆ ಅವರನ್ನು ತನ್ನಂತೆ ಪ್ರತಿಭಾವಂತರಾಗುವತೆ ಮಾಡುವಲ್ಲಿ ಶ್ರಮಿಸಬೇಕು. ಇಂದು ಶಾಲೆಯ ಬೇರೆ ಬೇರೆ ಜವಾಬ್ದಾರಿಗಳನ್ನು ನಿಭಾಯಿಸಲು ಆಯ್ಕೆಯಾದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜದ ರಥವನ್ನು ನಡೆಸುವ ಸಾರಥಿಗಳೂ ಆಗಬಹುದು ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲರಾದ ವಿದ್ಯಾ ಕಾಮತ್ ಜಿ. ಶಾಲಾ ಸಂಸತ್ತಿನ ವಿವಿಧ ಜವಾಬ್ದಾರಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಾಲಾ ವಿದ್ಯಾರ್ಥಿ ಸಂಘದ ಚುನಾವಣೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ. ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆದು ಬದುಕಿನಲ್ಲಿ ಯಶಸ್ಸನ್ನು ಗಳಿಸಬೇಕೆಂದು ನಾಯಕರುಗಳು ಸದರಿ ಶೈಕ್ಷಣಿಕ ವರ್ಷದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಿದರು.

ಉದ್ಘಾಟಕರಿಂದ ಶಾಲಾ ಸಂಸತ್ತಿನಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಡ್ಜ್‌ಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿ ಉದ್ಘಾಟನಾ ಸಮಾರಂಭವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಸಿ ನಾೖಕ್‌, ಸಗುಣ ಸಿ ನಾೖಕ್‌, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು, ಶಕ್ತಿ ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಪ್ರಭಾಕರ ಜಿ.ಎಸ್., ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ಶಿಕ್ಷಕಿ ಸಂಗೀತ ಮರೀನ ಪೆರಿಸ್‌ ಕಾರ್ಯಕ್ರಮ ನಿರೂಪಿಸಿದರು. ಲಿಜಿನ್‌ಜಾಯ್ ಸ್ವಾಗತಿಸಿದರು, ಭವ್ಯಶ್ರೀ ವಂದಿಸಿದರು.