Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಕಾಲೇಜಿನ ವಿದ್ಯಾರ್ಥಿ SGFI ಗೆ ಆಯ್ಕೆ

ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಥಮ್ ನಾಯಕ್ ರಾಜಸ್ಥಾನದ ಜೋದ್‌ಪುರ್‌ನಲ್ಲಿ ನಡೆದ ರಾಷ್ಟ್ರೀಯ ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಮುಂದಿನ ತಿಂಗಳು ನಡೆಯಲಿರುವ SGFI ರಾಷ್ಟ್ರೀಯ ಶಾಲಾ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದುಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.