ಮಂಗಳೂರು ಅ. 10 : ದಿನಾಂಕ: 12-09-2023 ರಂದು ಎನ್ಎಸ್ಎಎಂ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಬಿ.ಸಿ ಆಳ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.