ಮಂಗಳೂರು ಫೆ. 06 : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿಗೆ ವಿದ್ಯಾಭಾರತೀಯ ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಶ್ರೀ ಕಾಶಿಪತಿಯವರು ಭೇಟಿ ನೀಡಿದರು. ನಂತರ ಶಾಲೆಯ ಪ್ರಾರ್ಥನೆಯಲ್ಲಿ ಭಾಗವಹಿಸಿ ದೀಪ ಬೆಳಗಿಸಿದರು. ಇವರು ಶಕ್ತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ನಾವೆಲ್ಲರೂ ಪ್ರಾಮಾಣಿಕತೆಯನ್ನು ನಮ್ಮ ಕಲಿಯುವಿಕೆಯಲ್ಲಿ ಪ್ರದರ್ಶಿಸಬೇಕು. ಈ ಮೂಲಕ ಜೀವನದುದ್ದಕ್ಕೂ ಶಿಸ್ತು ಮತ್ತು ಸಂಸ್ಕಾರವನ್ನು ಆಳವಡಿಸಬೇಕೆಂದು ಹೇಳಿದರು. ರಾಷ್ಟ್ರಭಕ್ತಿಯನ್ನು ತಮ್ಮ ಜೀವನದಲ್ಲಿ ಆಳವಡಿಸಿದಾಗ ಸಮಾಜದಲ್ಲಿ ಬದಲಾವಣಿಗಳು ಸಾಧ್ಯ. ತಂದೆ-ತಾಯಿ ಮತ್ತು ಶಿಕ್ಷಕರಿಗೆ ಸಮಾನ ಗೌರವವನ್ನು ನೀಡಬೇಕೆಂದು ಹೇಳಿದರು.



ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾಭಾರತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕುಮಾರ್, ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ, ಅಭಿವೃದ್ದಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪ್ರಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ. ಜಿ. ಕಾಮತ್ ಉಪಸ್ಥಿತರಿದ್ದರು. ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಅಧ್ಯಾಪಕಿ ಪ್ರೇಮಲತಾ ಕಾರ್ಯಕ್ರಮವನ್ನು ನಿರೂಪಿಸಿದರು.