Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಅಂತರಾಷ್ಟ್ರೀಯ ಟೈಕ್ವಾಂಡೋ ಚಾಂಪಿಯನ್‌ಶಿಪ್‌ – ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ

ಮಲೇಷಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಟೈಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ

ಮಂಗಳೂರು ಆ. 19 : ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇದೇ ತಿಂಗಳ ಆಗಸ್ಟ್ 17 ರಿಂದ ಮಲೇಷಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಟೈಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಗೆದ್ದಿರುತ್ತಾರೆ. ಇವರಿಗೆ ಕೃಷ್ಣ ನಾಯಕ್ ಅವರು ಟೈಕ್ವಾಂಡೋ ತರಬೇತುದಾರರಾಗಿದ್ದಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.