Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಟ್ರೆಡಿಶನಲ್ ಡೇ.. ರಂಗುರಂಗಿನ ಸಾಂಪ್ರದಾಯಿಕ ಉಡುಗೆ ಧರಿಸಿ ವಿಜೃಂಭಿಸಿದ ವಿದ್ಯಾರ್ಥಿಗಳು

ಮಂಗಳೂರು : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ “ಶಕ್ತಿ ಕ್ಯಾನ್ ಕ್ರಿಯೇಟ್” ಬೇಸಿಗೆ ಶಿಬಿರದ ಅಂಗವಾಗಿ ಆಯೋಜಿಸಿದ್ದ ಟ್ರೆಡಿಶನಲ್ ಡೇ ಆಚರಣೆಯಲ್ಲಿ ಶಿಬಿರದ ಶಿಬಿರಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ದೇಶದ ವಿವಿಧ ಪ್ರದೇಶದ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ಸಂಭ್ರಮಿಸಿದರು. ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ. ನಾಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶಕ್ತಿ ವಿದ್ಯಾಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಹಾಗೂ ಶಕ್ತಿ ವಸತಿ ಶಾಲೆಯ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಮ್ಮ ಸಂಸ್ಕೃತಿ, ಸಂಪ್ರದಾಯದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಉಂಟುಮಾಡಬೇಕು. ಭಾರತ ಅನೇಕ ವಿಭಿನ್ನ ಸಂಸ್ಕೃತಿಗಳ ತವರು. ಒಂದೊಂದು ರಾಜ್ಯದಲ್ಲಿಯೂ ವೇಷ, ಭಾಷೆ ಭಿನ್ನ ಭಿನ್ನವಾಗಿದೆ. ಆದರೆ ಆ ಎಲ್ಲ ವಿವಿಧತೆಯ ನಡುವೆಯೂ ನಾವೆಲ್ಲರೂ ಭಾರತೀಯರು ಎಂಬ ಏಕತೆಯ ಭಾವ ಮಕ್ಕಳಲ್ಲಿ ಬೆಳೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು, 40 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.