Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ  ಭಾರತ್ ಸ್ಕೌಟ್ ಮತ್ತು ಗೈಡ್ ಹಾಗೂ ಕಬ್ ಮತ್ತು ಬುಲ್ ಬುಲ್ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸರ್ವ ಧರ್ಮ ಪ್ರಾರ್ಥನೆಯನ್ನು ನೆರವೇರಿಸಿ ಕೊಡುವ ಮೂಲಕ ಸ್ಕೌಟಿಂಗ್ ಮತ್ತು ಗೈಡಿಂಗ್ ನ ಸ್ಥಾಪಕರಾದ ಲಾರ್ಡ್ ರಾಬರ್ಟ್ ಬೇಡನ್ ಪೊವೆಲ್ ಮತ್ತು ಅವರ ಪತ್ನಿ ಮತ್ತು ವಿಶ್ವ ಮುಖ್ಯ ಮಾರ್ಗದರ್ಶಿ ಲೇಡಿ ಓಲೇವ್ ಬೇಡನ್ ಪೊವೆಲ್ ಅವರ ಜನ್ಮದಿನ ಮತ್ತು ವಿಶ್ವ ಚಿಂತನಾ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ವಿದ್ಯಾರ್ಥಿಗಳು ಸರ್ವ ಧರ್ಮ ಗ್ರಂಥಗಳ ಪಠಣವನ್ನು ಮಾಡಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ  ಶಾಲಾ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ಹಾಗೂ ಸ್ಕೌಟ್ ಮತ್ತು ಗೈಡ್ ವಿಭಾಗದ ಮುಖ್ಯಸ್ಥರಾದ  ಭವ್ಯಶ್ರೀ, ಸುರೇಖಾ, ಸುಪ್ರಿಯ ಮತ್ತು ಕಬ್ ವಿಭಾಗದ ಮುಖ್ಯಸ್ಥರಾದ ಶರಣಪ್ಪ, ಬುಲ್ ಬುಲ್ ವಿಭಾಗದ ಮುಖ್ಯಸ್ಥರಾದ ಪ್ರೇಮಲತಾ, ಸುನೀತ ಉಪಸ್ಥಿತರಿದ್ದರು. ಕಬ್ ಮಾಸ್ಟರ್ ಶರಣಪ್ಪ ದಿನದ ಪ್ರಾಮುಖ್ಯತೆಯನ್ನು ವಾಚಿಸಿದರು.