Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಶಕ್ತಿ ಪಿಯು ಕಾಲೇಜಿಗೆ ಪ್ರಶಸ್ತಿ 

ಮಂಗಳೂರು ಸೆ. 30 : ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಕಟೀಲು ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಇಲ್ಲಿ ಮುಕ್ತಾಯಗೊಂಡ ದ.ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಮಯೂರ್ ಡಿ.ಶೆಟ್ಟಿ ದ್ವಿತೀಯ ಪಿಯುಸಿ 53 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ವಿನೀತ್ ಕುಮಾರ್ ದ್ವಿತೀಯ ಪಿಯುಸಿ 63  ಕೆಜಿ ವಿಭಾಗದಲ್ಲಿ ಚಿನ್ನದ ಪದಕ, ಧನ್ಯತ ದ್ವಿತೀಯ ಪಿಯುಸಿ 53 ಕೆಜಿ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ ಹಾಗೂ ಬಾಲಕರ ತಂಡ ಸಮಗ್ರ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ. ಸಿ. ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್‌ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.